ಬಾವಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ ಕೊಲೆ ಶಂಕೆಯಡಿ ಸಹೋದರನ ಬಂಧನ



(ನ್ಯೂಸ್ ಕಡಬ) newskadaba.com ಜು. 20. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟುವಿನ ಕೃಷ್ಣಾಪುರ ಮಠ ಸಮೀಪದ ಬಾವಿಯಲ್ಲಿ 20 ವರ್ಷದ ಯುವಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.







ಮೃತನನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ. ಇವರು ಉದ್ಯೋಗ ನಿಮಿತ್ತ ಮಂಗಳೂರಿಗೆ ಬಂದು ಬಾಡಿಗೆ ಮನೆಯಲ್ಲಿದ್ದುಕೊಂಡು ಕೂಲಿ ಕೆಲಸ ಮಾಡುತ್ತಿದ್ದರು.






ಮೃತನೊಂದಿಗೆ ವಾಸವಿದ್ದ ಆತನ ಅಣ್ಣ ಸೋಮನಾಥ್ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆತನೇ ಪ್ರಮುಖ ಶಂಕಿತನೆಂದು ತಿಳಿದುಬಂದಿದೆ. ಹೆಚ್ಚಿನ ವಿಚಾರಣೆಗಾಗಿ ಪಕ್ಕದ ಮನೆಯ ಮತ್ತೋರ್ವ ಯುವಕನನ್ನೂ ವಶಕ್ಕೆ ಪಡೆಯಲಾಗಿದೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ವೈಯಕ್ತಿಕ ವೈಷಮ್ಯ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top