ಬೆಳ್ತಂಗಡಿ: ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿ ಕೋಟ್ಯಂತರ ರೂ. ವಂಚಿಸಿದ ಖದೀಮೆ!



(ನ್ಯೂಸ್‌ ಕಡಬ) newskadaba.com,  ಜು .21 ಬೆಳ್ತಂಗಡಿ: ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯವಾಗಿ, ಮದುವೆಯಾಗುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ ₹87 ಲಕ್ಷಕ್ಕೂ ಅಧಿಕ ಹಣ ಪಡೆದು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.ಆರೋಪಿ: ಅನಿಷಾ ಪಾಲನ್ನ (35)2024ರ ಮೇ ತಿಂಗಳಲ್ಲಿ ಮ್ಯಾಟ್ರಿಮೋನಿ ಸೈಟ್‌ ಮೂಲಕ ಪರಿಚಯವಾಗಿ, ಬಳಿಕ ಇನ್‌ಸ್ಟಾಗ್ರಾಂ ಹಾಗೂ ಫೋನ್ ಮೂಲಕ ಸಂಪರ್ಕದಲ್ಲಿದ್ದರು.







ಮದುವೆಯಾಗುವುದಾಗಿ ನಂಬಿಸಿದ ಆರೋಪಿ, ವಿವಿಧ ಕಾರಣಗಳನ್ನು ನೀಡಿ ಹಂತ-ಹಂತವಾಗಿ ವಿವಿಧ ಬ್ಯಾಂಕ್‌ ಖಾತೆಗಳ ಮೂಲಕ ಒಟ್ಟು ₹87,22,710 ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಹಣ ಪಡೆದ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿ ಸಂಪರ್ಕಕ್ಕೆ ಸಿಗದೆ ವಂಚಿಸಿದ್ದಾರೆ.






ದೂರುದಾರರ ಆರೋಪದ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ (ಅ.ಕ್ರ. 78/2026, BNS ಕಲಂ 318(4)) ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

error: Content is protected !!
Scroll to Top