ಶ್ರೀ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದಾಗ ದುರಂತ

(ನ್ಯೂಸ್‌ ಕಡಬ) newskadaba.com,  ಜು .21:ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಮಂತ್ರಾಲಯ ಬಳಿ ಮಂಗಳವಾರ ಮುಂಜಾನೆ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಹಾಪ್‌ಕಾಮ್ಸ್ ಜನರಲ್ ಮ್ಯಾನೇಜರ್ (ಜಿಎಂ) ರವಿ ಶೆಟ್ಟಿ (43) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ನೇಹಿತರೊಂದಿಗೆ ಶ್ರೀ ರಾಘವೇಂದ್ರ ಸ್ವಾಮಿ ದೇವಸ್ಥಾನದ ದರ್ಶನಕ್ಕೆ ತೆರಳುತ್ತಿದ್ದ ವೇಳೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ (ಡಿವೈಡರ್) ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ಕಾರಿನಲ್ಲಿದ್ದ ಮಂಗಳೂರಿನ ಪ್ರದೀಪ್ ಆಳ್ವಾ, ಪುರುಷೋತ್ತಮ ಭಂಡಾರಿ ಹಾಗೂ ಸಿಎ ಸುದೇಶ್ ರೈ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ತಕ್ಷಣವೇ ಎಮ್ಮಿಗನೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತದ ನಿಖರ ಕಾರಣ ತಿಳಿಯಲು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Scroll to Top