ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ವಿವಿಧ ಕಾರ್ಯಕ್ರಮಗಳಡಿ ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಜು. 21. 2026-27ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗಳು ಚಾಲ್ತಿಯಲ್ಲಿದ್ದು, ವಿವಿಧ ಕಾರ್ಯಕ್ರಮಗಳಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಏಕಲವ್ಯ ಪ್ರಶಸ್ತಿ-2025, ಜೀವಮಾನ ಸಾಧನೆ ಪ್ರಶಸ್ತಿ -2025, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ-2025, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ-2025, ಗುರಿ-ಒಲಂಪಿಕ್ ಪದಕ- 2026-27, ನಗದು ಪುರಸ್ಕಾರ- 2025, ಶೈಕ್ಷಣಿಕ ಶುಲ್ಕ ಮರು ಪಾವತಿ- 2026-27, ಕ್ರೀಡಾ ವಿದ್ಯಾರ್ಥಿ ವೇತನ-2025-26
ಅರ್ಹ ಕ್ರೀಡಾಪಟುಗಳು ಅರ್ಜಿಗಳನ್ನು  ಅಧಿಕೃತ ವೆಬ್‍ಸೈಟ್ https://sevasindhu.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ   ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ  31 ಕೊನೆಯ ದಿನ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ  ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







error: Content is protected !!
Scroll to Top