ನಾಳೆ(ಜು. 23) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ



(ನ್ಯೂಸ್ ಕಡಬ) newskadaba.com ಜು. 22. ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ನಾಳೆ ಗುರುವಾರ (ಜು.23) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಆದೇಶ ಹೊರಡಿಸಿದ್ದಾರೆ.







ಈ ಆದೇಶದಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.






error: Content is protected !!
Scroll to Top