ಮಂಗಳೂರು: ಹೆಲಿಕಾಪ್ಟರ್ ಹಾರಾಟ ಕಂಡು ಆತಂಕಗೊಂಡ ಜನ; NSG ಮಾಕ್‌ಡ್ರಿಲ್ ಎಂದು ಅಧಿಕಾರಿಗಳ ಸ್ಪಷ್ಟನೆ



(ನ್ಯೂಸ್‌ ಕಡಬ) newskadaba.com,  ಜು.23: ಮಂಗಳೂರಿನ ವಿವಿಧ ಭಾಗಗಳಲ್ಲಿ, ವಿಶೇಷವಾಗಿ ಬಹುಮಹಡಿ ಕಟ್ಟಡಗಳ ಸಮೀಪ ಹೆಲಿಕಾಪ್ಟರ್ ತೀರ ಕಡಿಮೆ ಎತ್ತರದಲ್ಲಿ ಸಂಚರಿಸಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು.







ಇದು ರಾಷ್ಟ್ರೀಯ ಭದ್ರತಾ ಪಡೆ (NSG) ನಡೆಸುತ್ತಿರುವ ಭಯೋತ್ಪಾದನಾ ವಿರೋಧಿ ಅಣಕು ಕಾರ್ಯಾಚರಣೆಯ ಭಾಗವಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.






ಸಂಜೆ ನಡೆಯಲಿರುವ ಪೂರ್ಣ ಪ್ರಮಾಣದ ಕವಾಯತಿಗೆ ಮುನ್ನ ಸನ್ನದ್ಧತೆ ಹಾಗೂ ಭದ್ರತಾ ಸಂಸ್ಥೆಗಳ ನಡುವಿನ ಸಮನ್ವಯತೆಯನ್ನು ಪರಿಶೀಲಿಸಲು ಈ ಪರೀಕ್ಷಾರ್ಥ ಹಾರಾಟ ನಡೆಸಲಾಗಿದೆ.ತುರ್ತು ಸಂದರ್ಭಗಳನ್ನು ಎದುರಿಸುವ ಸಾಮರ್ಥ್ಯ ಮೌಲ್ಯಮಾಪನ ಮಾಡಲಾಗುತ್ತಿದ್ದು, ಸಾರ್ವಜನಿಕರು ಭದ್ರತಾ ಸಿಬ್ಬಂದಿಯೊಂದಿಗೆ ಸಹಕರಿಸುವಂತೆ ಕೋರಲಾಗಿದೆ.

error: Content is protected !!
Scroll to Top