ಮೊಬೈಲ್ ಕ್ಯಾಂಟೀನ್ ಖರೀದಿಸಲು ಎಸ್.ಸಿ/ಎಸ್.ಟಿ ಗಳಿಂದ ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಜು. 24. 2025-26 ನೇ ಸಾಲಿನಲ್ಲಿ ಎಸ್.ಸಿ.ಎಸ್.ಟಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಮೊಬೈಲ್ ಕ್ಯಾಂಟೀನ್ ಖರೀದಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.







ಅರ್ಜಿ ಸಲ್ಲಿಸಲು  ಆಗಸ್ಟ್ 1 ಕೊನೆಯ ದಿನ. ಆಸಕ್ತ ಅರ್ಜಿದಾರರು ಅರ್ಜಿ ನಮೂನೆಯನ್ನು ಪಡೀಲ್ “ಪ್ರಜಾಸೌಧ” ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಕೇಂದ್ರದಲ್ಲಿ 2 ನೇ ಮಹಡಿಯಲ್ಲಿರುವ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರ ಕಛೇರಿಯನ್ನು (0824-2453926/9844535509 ಅಥವಾ ಇಮೇಲ್ adtourismmangalore@gmail.com) ಸಂಪರ್ಕಿಸಿ  ಪಡೆಯಬಹುದು ಎಂದು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






error: Content is protected !!
Scroll to Top