ಕಪ್ಪು ಸಮುದ್ರದಲ್ಲಿ ವಾಣಿಜ್ಯ ಹಡಗಿನ ಮೇಲೆ ದಾಳಿ: ಓರ್ವ ಭಾರತೀಯ ನಾಗರಿಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ಜು.25: ಕಪ್ಪು ಸಮುದ್ರದ ಮೂಲಕ ಸಾಗುತ್ತಿದ್ದ MV OMORFI ಎಂಬ ವಾಣಿಜ್ಯ ಹಡಗಿನ ಮೇಲೆ ಭೀಕರ ದಾಳಿ ನಡೆದಿದ್ದು, ಭಾರತೀಯ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಜುಲೈ 18 ರಂದು ರಷ್ಯಾದ ಪ್ರಾದೇಶಿಕ ಜಲಪ್ರದೇಶದಲ್ಲಿ ಈ ಘಟನೆ ವರದಿಯಾಗಿದ್ದು, ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ಈ ಮಾಹಿತಿಯನ್ನು ಖಚಿತಪಡಿಸಿದೆ.

ದಾಳಿಯ ಸಮಯದಲ್ಲಿ ಹಡಗಿನಲ್ಲಿ ಒಟ್ಟು 10 ಮಂದಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದರು. ಅವರಲ್ಲಿ ಮೂವರು ಭಾರತೀಯ ಪ್ರಜೆಗಳಾಗಿದ್ದರು.ಘಟನೆಯಲ್ಲಿ ಓರ್ವ ಭಾರತೀಯ ಪ್ರಜೆ ಅಸುನೀಗಿದ್ದು, ಹಡಗಿನಲ್ಲಿದ್ದ ಉಳಿದ ಇಬ್ಬರು ಭಾರತೀಯ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಮೃತರ ಅಗಲಿಕೆಗೆ ತೀವ್ರ ಕಂಬನಿ ಮಿಡಿದಿರುವ ವಿದೇಶಾಂಗ ಸಚಿವಾಲಯವು, ದುಃಖತಪ್ತ ಕುಟುಂಬಕ್ಕೆ ಸಂತಾಪ ಸೂಚಿಸಿದೆ.

Scroll to Top