(ನ್ಯೂಸ್ ಕಡಬ) newskadaba.com ಜು. 25. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆಹಾರ ಮತ್ತು ಸ್ವಯಂಸೇವಕರು ತೆರಳದಂತೆ ಪೊಲೀಸರು ತಡೆಯುತ್ತಿದ್ದಾರೆ ಎಂದು ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಆರೋಪಿಸಿದೆ.
ಈ ಕುರಿತು ಸಿಜೆಪಿ ವಕ್ತಾರ ಅಶುತೋಷ್ ರಾಂಕಾ ಅವರು ಟ್ವಿಟರ್ ಮೂಲಕ ವಾಟ್ಸಾಪ್ ಸಂದೇಶದ ಸ್ಕ್ರೀನ್ ಶಾಟ್ ಹಂಚಿಕೊಂಡಿದ್ದು, ದೆಹಲಿ ಪೊಲೀಸರು 5 ಕಿಲೋ ಮೀಟರ್ ದೂರದಲ್ಲೇ ಚೆಕ್ ಪೋಸ್ಟ್ ನಿರ್ಮಿಸಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ ಎಂದು ದೂರಿದ್ದಾರೆ.
ಪೊಲೀಸರ ಯಾವುದೇ ತಡೆ ಕ್ರಮಗಳಿಂದ ಪ್ರತಿಭಟನೆಯನ್ನು ಅಥವಾ ಸಚಿವರ ರಾಜೀನಾಮೆಯನ್ನು ತಡೆಯಲು ಸಾಧ್ಯವಿಲ್ಲ ಎಂದು ಅಶುತೋಷ್ ರಾಂಕಾ ಸರ್ಕಾರ ಹಾಗೂ ಆಡಳಿತಕ್ಕೆ ಸವಾಲು ಹಾಕಿದ್ದಾರೆ.










