ಮಂಗಳೂರು ಬೃಹತ್ ಪ್ರತಿಭಟನೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿದ್ಯಾರ್ಥಿಗಳ ಆಗ್ರಹ



(ನ್ಯೂಸ್ ಕಡಬ) newskadaba.com ಜು. 25. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಹಗರಣವನ್ನು ಖಂಡಿಸಿ ‘ವಿ ದಿ ಪೀಪಲ್ ಆಫ್ ಇಂಡಿಯಾ’ ಮಂಗಳೂರು ಸಂಘಟನೆಯ ನೇತೃತ್ವದಲ್ಲಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಇಲ್ಲಿನ ಹಂಪನಕಟ್ಟೆಯ ಮಿಲಾಗ್ರಿಸ್ ಸರ್ಕಲ್‌ನಿಂದ ಕುದ್ಮುಲ್ ರಂಗರಾವ್ ಪುರಭವನದವರೆಗೆ ಮೆರವಣಿಗೆ ನಡೆಸಿ, ಶಾಂತಿಯುತ ಸಮಾವೇಶ ನಡೆಸಲಾಯಿತು.







ನೀಟ್ ಸೋರಿಕೆಯಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಲಾಯಿತು.






ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಾಲೇಜುಗಳಿಂದ ಸುಮಾರು 6,000 ರಿಂದ 7,000 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿ ಮುಖಂಡರಾದ ಸುಶಾನ್, ಎಥಾನ್ ತಾವ್ರೋ, ರೆಹಾನ್ ಮುಹಮ್ಮದ್ ಮತ್ತು ಸಫ್ವಾನ್ ನ್ಯಾಸ್ ನೇತೃತ್ವ ವಹಿಸಿದ್ದರು.

ಭ್ರಷ್ಟಾಚಾರದಿಂದ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿ, ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಲಾಯಿತು.

error: Content is protected !!
Scroll to Top