ಕಾಸರಗೋಡು: ಮಾದಕ ವಸ್ತು ಸಾಗಾಟ ಜಾಲದ ಪ್ರಮುಖ ಆರೋಪಿ ವಿದ್ಯಾನಗರ ಪೊಲೀಸರ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ಜು.25: ಕಾಸರಗೋಡು ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಟ ಹಾಗೂ ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೋರ್ವನನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.ಬಂಧಿತ ವ್ಯಕ್ತಿಯನ್ನು ಚೆಂಗಳ ಸಮೀಪದ ಫೋರ್ಥ್ ಮೈಲ್ ನಿವಾಸಿ ಮೊಹಮ್ಮದ್ ಅಬೂಬಕ್ಕರ್ ಎಂದು ಗುರುತಿಸಲಾಗಿದೆ.

ಆರೋಪಿಯ ವಿರುದ್ಧ ಜಿಲ್ಲೆಯ ವಿವಿಧ ಭಾಗಗಳಲ್ಲಿ ದೀರ್ಘಕಾಲದಿಂದ ಮಾದಕ ದ್ರವ್ಯ ಸಾಗಾಟದ ಜಾಲ ನಡೆಸುತ್ತಿದ್ದ ಆರೋಪವಿದೆ.ವಿದ್ಯಾನಗರ, ಮೇಲ್ಪರಂಬ ಹಾಗೂ ಅಡೂರು ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ಧ ಮಾದಕ ದ್ರವ್ಯ ಕಾಯ್ದೆ (NDPS Act) ಅಡಿಯಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Scroll to Top