ಜುಲೈ 29ರಂದು ಜಿಲ್ಲಾಡಳಿತ ವತಿಯಿಂದ ಹಡಪದ ಅಪ್ಪಣ್ಣ ಜಯಂತಿ

(ನ್ಯೂಸ್ ಕಡಬ) newskadaba.com ಜು. 27. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಕಾರದೊಂದಿಗೆ ಹಡಪದ ಅಪ್ಪಣ್ಣ ಜಯಂತಿ ಜುಲೈ 29 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಉರ್ವಾಸ್ಟೋರ್ ತುಳುಭವನದಲ್ಲಿ ನಡೆಯಲಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಮೂಡಬಿದಿರೆ ಆಳ್ವಾಸ್ ಕಾಲೇಜು ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಹರೀಶ್ ಟಿ.ಜಿ ಅವರು ಜಯಂತಿ ಸಂದೇಶವನ್ನು ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top