ಕಲ್ಲಡ್ಕ ಪ್ರಭಾಕರ್ ಭಟ್ ಬಂಧನವಾದರೆ ರಾಜ್ಯ ಹೊತ್ತಿ ಉರಿಯಲಿದೆ‌. ► ಮಾಜಿ ಮುಖ್ಯಮಂತ್ರಿ ಬಿ‌.ಎಸ್‌. ಯಡಿಯೂರಪ್ಪ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.13. ರಾಜ್ಯ ಸರಕಾರವು ವಿನಾ ಕಾರಣ ಆರೋಪ ಹೊರಿಸಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ರ ವಿರುದ್ಧ ಷಡ್ಯಂತ್ರ ಹೂಡುತ್ತಿದೆ. ಎಲ್ಲಿಯಾದರೂ ಅವರ ಬಂಧನವಾದಲ್ಲಿ ರಾಜ್ಯದಲ್ಲಿ ಬೆಂಕಿ ಹೊತ್ತಿ ಉರಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ಅವರು ಕದ್ರಿಯಲ್ಲಿ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿ, ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ 24ಕ್ಕಿಂತ ಅಧಿಕ ಕೊಲೆ ಪ್ರಕರಣಗಳು ನಡೆದಿವೆ. ಈ ಬಗ್ಗೆ ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆದರೆ ಸತ್ಯ ಹೊರಬರಲಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ಕೇರಳದ ಕೆ.ಸಿ. ವೇಣುಗೋಪಾಲ್ ರಾಜ್ಯದಲ್ಲಿ ಕೇರಳ ಮಾದರಿಯ ಕೊಲೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಗಲಭೆ ಪ್ರಕರಣಗಳಿಗೆ ಸಂಬಂಧಿಸಿ ಅಮಾಯಕರನ್ನು ಬಂಧಿಸಲಾಗುತ್ತಿದ್ದು, ನೈಜ ಆರೋಪಿಗಳಿಗೆ ರಕ್ಷಣೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.

error: Content is protected !!
Scroll to Top