ಪತ್ನಿಯನ್ನು ಕೊಂದು ಅತ್ತೆ-ಮಾವನಿಗೆ ವೀಡಿಯೋ ಕಾಲ್ ಮಾಡಿದ ಪತಿ!

(ನ್ಯೂಸ್‌ ಕಡಬ) newskadaba.com,  ಜು.28 ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದ್ದು, ಪತ್ನಿಯನ್ನ ಹತ್ಯೆಗೈದು ಆಕೆ ಪ್ರಾಣಕ್ಕಾಗಿ ಒದ್ದಾಡುತ್ತಿದ್ದ ದೃಶ್ಯವನ್ನು ಅತ್ತೆ-ಮಾವನಿಗೆ ವೀಡಿಯೋ ಕಾಲ್ ಮೂಲಕ ತೋರಿಸಿದ ಕ್ರೂರ ಘಟನೆ ನಡೆದಿದೆ.

ಮೃತ ಮಹಿಳೆಯನ್ನ ಭಾಗ್ಯಶ್ರೀ ಜಿಗಳೂರು (23) ಎಂದು ಗುರುತಿಸಲಾಗಿದೆ. ಅನೈತಿಕ ಸಂಬಂಧದ ಶಂಕೆಯಿಂದ ಗಂಡ ಪ್ರವೀಣ್ ಜಿಗಳೂರು ಎಂಬಾತ ಪತ್ನಿಯೊಂದಿಗೆ ಜಗಳವಾಡಿ, ಕಟ್ಟಿಗೆಯಿಂದ ಹಲ್ಲೆ ನಡೆಸಿ ನೇಣು ಬಿಗಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಕೊಲೆಯ ಬಳಿಕ ಆ ದೃಶ್ಯವನ್ನು ಮೊಬೈಲ್‌ನಲ್ಲಿಯೂ ಚಿತ್ರೀಕರಿಸಿದ್ದು, ಸ್ಥಳೀಯರಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಬೀಳಗಿ ಪೊಲೀಸರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯೆಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಪ್ರವೀಣ್‌ನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

Scroll to Top