ಮಂಗಳೂರಿನ ಹಂಪನಕಟ್ಟೆಯಲ್ಲಿ ಭಾರೀ ಬೆಂಕಿ ಅವಘಡ: ಶೂ ಅಂಗಡಿ ಸಂಪೂರ್ಣ ಭಸ್ಮ!

(ನ್ಯೂಸ್‌ ಕಡಬ) newskadaba.com,  ಜು.28 ಮಂಗಳೂರು: ಮಂಗಳೂರಿನ ಪ್ರಮುಖ ವಾಣಿಜ್ಯ ಪ್ರದೇಶವಾದ ಹಂಪನಕಟ್ಟೆಯಲ್ಲಿರುವ ಶೂ ಅಂಗಡಿಯೊಂದರಲ್ಲಿ ಮಂಗಳವಾರ ಬೆಳಗಿನ ಜಾವ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿ ಸಂಪೂರ್ಣ ಭಸ್ಮಗೊಂಡಿದೆ.

ಬೆಂಕಿಯ ಕೆನ್ನಾಲಿಗೆ ತೀವ್ರವಾಗಿದ್ದರಿಂದ ಪಕ್ಕದಲ್ಲಿದ್ದ ಎರಡು ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದೆ. ಘಟನೆಯಲ್ಲಿ ಯುರೋಪ್’ ಹೆಸರಿನ ಪ್ರಸಿದ್ಧ ಶೂ ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಸತತ ಪ್ರಯತ್ನ ನಡೆಸಿ ಬೆಂಕಿಯನ್ನು ಹತೋಟಿಗೆ ತರುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಮೇಲ್ನೋಟಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿರುವುದು ಈ ಬೆಂಕಿ ಅವಘಡಕ್ಕೆ ಕಾರಣ ಎನ್ನಲಾಗಿದೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ನಾಶವಾಗಿದ್ದು, ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.

Scroll to Top