(ನ್ಯೂಸ್ ಕಡಬ) newskadaba.com ಜು.29: ಜಪಾನ್‌ನ ದಕ್ಷಿಣ ಭಾಗದ ಕ್ಯುಶು ದ್ವೀಪದಲ್ಲಿರುವ ಕುಮಾಮೊಟೊ ಪ್ರಾಂತ್ಯದಲ್ಲಿ ಮಂಗಳವಾರ ಮಧ್ಯಾಹ್ನ 4:27ಕ್ಕೆ ಪ್ರಬಲ ಭೂಕಂಪ ಸಂಭವಿಸಿದೆ.ಭೂಕಂಪವು 10 ಕಿ.ಮೀ ಆಳದಲ್ಲಿ ಸಂಭವಿಸಿದ್ದು, ಭೂಕಂಪನದ ತೀವ್ರತೆ 6.8 ರಿಂದ 7.1 ರಷ್ಟು ದಾಖಲಾಗಿದೆ ಎಂದು ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.
ದುರಂತದಲ್ಲಿ ಈವರೆಗೆ 13 ಮಂದಿ ಸಾವನ್ನಪ್ಪಿದ್ದಾರೆ. ಹಲವು ಕಟ್ಟಡಗಳು ನೆಲಸಮಗೊಂಡಿದ್ದು, ಸೇತುವೆಗಳು ಜಖಂಗೊಂಡಿವೆ. ಗೂಡ್ಸ್ ರೈಲುಗಳು ಉರುಳಿಬಿದ್ದಿದ್ದು, ಹಲವೆಡೆ ಬೆಂಕಿ ಕಾಣಿಸಿಕೊಂಡಿದೆ.1 ಮೀಟರ್‌ವರೆಗೆ ಎತ್ತರದ ಅಲೆಗಳು ಏಳುವ ಸಾಧ್ಯತೆಯಿರುವುದರಿಂದ ಕರಾವಳಿ ಜನರಿಗೆ ಸುರಕ್ಷಿತ ಹಾಗೂ ಎತ್ತರದ ಪ್ರದೇಶಗಳಿಗೆ ತೆರಳಲು ಸೂಚಿಸಲಾಗಿದೆ.
ಕುಮಾಮೊಟೊ, ನಾಗಸಾಕಿ, ಕಾಗೋಶಿಮಾ, ಫುಕುವೋಕಾ, ಸಾಗಾ, ಓಯಿಟಾ ಮತ್ತು ಮಿಯಾಜಾಕಿ.









