(ನ್ಯೂಸ್ ಕಡಬ) newskadaba.com, ಜು.30 : ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ನಿವಾಸಿ ಚಂದ್ರಹಾಸ ಅವರ ಮನೆಯಲ್ಲಿ ವಿದ್ಯುತ್ ಸಂಪರ್ಕದ ತಾಂತ್ರಿಕ ದೋಷದಿಂದ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದೆ.
ಮನೆಯಲ್ಲಿದ್ದ ಪೀಠೋಪಕರಣಗಳು, ಹಾಸಿಗೆ, ಅಲಮಾರಿಯಲ್ಲಿದ್ದ ವಸ್ತುಗಳು, ಬಟ್ಟೆಗಳು ಹಾಗೂ ಗೃಹೋಪಯೋಗಿ ಸಾಮಗ್ರಿಗಳು ಬೆಂಕಿಗಾಹುತಿಯಾಗಿದ್ದು, ಕುಟುಂಬಕ್ಕೆ ಭಾರಿ ಆರ್ಥಿಕ ನಷ್ಟ ಸಂಭವಿಸಿದೆ.
ಅವಘಡದ ವೇಳೆ ಮನೆಯಲ್ಲಿದ್ದವರು ತಕ್ಷಣವೇ ಹೊರಬಂದಿದ್ದರಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ.ಸಾರ್ವಜನಿಕರು ಹಾಗೂ ಸ್ಥಳೀಯರು ತಕ್ಷಣ ಸ್ಪಂದಿಸಿ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








