ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಖಾದಿ ವಸ್ತ್ರ ಮಾರಾಟ: ಆಗಸ್ಟ್ 7 ರವರೆಗೆ ವಿಸ್ತರಣೆ – News Kadaba

ಖಾದಿ ವಸ್ತ್ರ ಮಾರಾಟ: ಆಗಸ್ಟ್ 7 ರವರೆಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 30. ಖಾದಿ ಬಳಕೆಯನ್ನು ಉತ್ತೇಜಿಸಲು ಎಲ್ಲಾ ಸರ್ಕಾರಿ/ ಅನುದಾನಿತ ಸಂಸ್ಥೆಗಳು/ ನಿಗಮ/ಮಂಡಳಿ/ಸ್ವಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ ಅಧಿಕಾರಿ/ನೌಕರರುಗಳು ಸ್ವಯಂ ಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸಲು ಹಾಗೂ  ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಖಾದಿ ಉಡುಪನ್ನು ಧರಿಸುವಂತೆ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳಿಗೆ ಸೂಚಿಸಲಾಗಿದೆ.

 

ಅದರಂತೆ, ರೂರಲ್ ರಿಸೋರ್ಸಸ್ ಡೆವಲಪ್‍ ಮೆಂಟ್ ಅಸೋಸಿಯೇಷನ್ ಸಂಘದವರು ಮಂಗಳೂರಿನಲ್ಲಿ ದೈನಂದಿನ ಬಳಕೆಯ ಖಾದಿ ಉಡುಪುಗಳನ್ನು ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ಉದ್ದೇಶಿಸಿದ್ದು, ಜುಲೈ 27 ರಿಂದ  ಆಗಸ್ಟ್ 1ರ ವರೆಗೆ 6 ದಿನಗಳವರೆಗೆ ನಗರದ ಮಿನಿ ವಿಧಾನಸೌಧ ಆವರಣದಲ್ಲಿರುವ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕರಾವಳಿ ಸಭಾಂಗಣದಲ್ಲಿ ಖಾದಿ ಉಡುಪುಗಳನ್ನು ಮಾರಾಟ ಮಾಡುತ್ತಿದ್ದು, ಈಗಾಗಲೇ ನಿಗಧಿಯಾಗಿರುವ ಮಾರಾಟದ ದಿನಾಂಕವನ್ನು ಆಗಸ್ಟ್ 7 ರವರೆಗೆ ವಿಸ್ತರಿಸಲಾಗಿದೆ.
ಆದ್ದರಿಂದ ಅಧಿಕಾರಿ/ಸಿಬ್ಬಂದಿ ವರ್ಗದವರು ಮೇಲ್ಕಂಡ ವಿಳಾಸಕ್ಕೆ ಭೇಟಿ ನೀಡಿ ಖಾದಿ ಉಡುಪುಗಳನ್ನು ವಿಶೇಷ ರಿಯಾಯಿತಿ ದರದಲ್ಲಿ ಖರೀದಿಸಿ ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಲು ಜಿಲ್ಲಾ ಖಾದಿ  ಗ್ರಾಮೋದ್ಯೋಗ ಅಧಿಕಾರಿ(ಪ್ರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top