(ನ್ಯೂಸ್ ಕಡಬ) newskadaba.com ಕಡಬ, ಜು. 30. ಕಡಬ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕ್ನಾನಾಯ ಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಶಾಲೆಗೆ ಹೆಮ್ಮೆ ತಂದಿದ್ದಾರೆ. ಅಂಡರ್-14 ಬಾಲಕಿಯರ ವಿಭಾಗ ಹಾಗೂ ಅಂಡರ್-17 ಬಾಲಕರ ವಿಭಾಗ ಎರಡರಲ್ಲೂ ಶಾಲೆಯ ತಂಡಗಳು ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟದ ಪಂದ್ಯಾಟಕ್ಕೆ ಅರ್ಹತೆ ಗಳಿಸಿವೆ.
ಅಂಡರ್-14 ಬಾಲಕಿಯರ ವಿಭಾಗದಲ್ಲಿ ಅರುಷಿ, ಸನಾ ಫಾತಿಮಾ, ಮಧುಶ್ರೀ ಹಾಗೂ ಸಾಧ್ವಿ ಅವರನ್ನೊಳಗೊಂಡ ತಂಡ ಅದ್ಭುತ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದುಕೊಂಡಿದೆ.
ಅಂಡರ್-17 ಬಾಲಕರ ವಿಭಾಗದಲ್ಲಿ ಪ್ರಜ್ಯೋತ್ ಎನ್. ಕೆ., ನಮನ್ ಹಾಗೂ ಚೇತನ್ ಅವರನ್ನೊಳಗೊಂಡ ತಂಡ ಉತ್ತಮ ಆಟವಾಡಿ ಪ್ರಥಮ ಸ್ಥಾನ ತನ್ನದಾಗಿಸಿಕೊಂಡಿದೆ.
ಒಂದೇ ಪಂದ್ಯಾವಳಿಯಲ್ಲಿ ಬಾಲಕಿಯರ ಹಾಗೂ ಬಾಲಕರ ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸಿರುವುದು ಶಾಲೆಗೆ ಹೆಮ್ಮೆಯ ಕ್ಷಣವಾಗಿದೆ. ಈ ಸಾಧನೆಯೊಂದಿಗೆ ಎರಡೂ ತಂಡಗಳು ತಾಲ್ಲೂಕು ಮಟ್ಟದ ಪಂದ್ಯಾಟಕ್ಕೆ ಅರ್ಹತೆ ಪಡೆದಿವೆ. ವಿಜೇತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ತರಬೇತುದಾರರು ಹಾಗೂ ಪೋಷಕರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದು, ಮುಂಬರುವ ತಾಲ್ಲೂಕು ಮಟ್ಟದ ಪಂದ್ಯಾಟದಲ್ಲಿಯೂ ಉತ್ತಮ ಸಾಧನೆ ಮಾಡಿ ಶಾಲೆಗೆ ಮತ್ತಷ್ಟು ಕೀರ್ತಿ ತರಲೆಂದು ಶುಭ ಹಾರೈಸಿದ್ದಾರೆ.








