ಪ್ರಧಾನಿ ಮೋದಿ ವೀಡಿಯೊ ಬ್ಲಾಕ್ ಪ್ರಕರಣ: ಕೇಂದ್ರ ಸರ್ಕಾರಕ್ಕೆ ಮೆಟಾ ಕ್ಷಮೆಯಾಚನೆ!



(ನ್ಯೂಸ್‌ ಕಡಬ) newskadaba.com,  ಜು.30  : ಜುಲೈ 23ರಂದು ಪರೀಕ್ಷಾ ಪತ್ರಿಕೆ ಸೋರಿಕೆ ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಗೆ ಸಂಬಂಧಿಸಿದಂತೆ, ಪ್ರಧಾನಿ ನರೇಂದ್ರ ಮೋದಿ ಅವರು ‘ಜೆನ್ ಝಿ’ ಯುವಕರನ್ನು ಉದ್ದೇಶಿಸಿ ಮಾತನಾಡಿದ್ದ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ತಾತ್ಕಾಲಿಕವಾಗಿ ಬ್ಲಾಕ್ ಮಾಡಲಾಗಿತ್ತು.







ಕೃತಕ ಬುದ್ಧಿಮತ್ತೆ ಆಧಾರಿತ ಕಂಟೆಂಟ್ ಮಾಡರೇಶನ್ ವ್ಯವಸ್ಥೆಯಲ್ಲಾದ ದೋಷದಿಂದ ಹೀಗಾಗಿದೆ ಎಂದು ಸ್ಪಷ್ಟನೆ ನೀಡಿದ ಮೆಟಾ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕ್ಷಮೆಯಾಚಿಸಿದೆ.ಮೆಟಾ ಸಂಸ್ಥೆಯ ಕ್ಷಮೆಯಾಚನೆಯನ್ನು ಸ್ವೀಕರಿಸಿದರೂ, “ತಾಂತ್ರಿಕ ದೋಷ” ಎಂಬ ಕಾರಣಕ್ಕೆ ಸರ್ಕಾರ ತೃಪ್ತಿ ವ್ಯಕ್ತಪಡಿಸಿಲ್ಲ. ಐಟಿ ಕಾರ್ಯದರ್ಶಿ ಎಸ್. ಕೃಷ್ಣನ್ ಅವರು ಎಐ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದಾರೆ.






ವಿವಿಐಪಿ ಖಾತೆಗಳ ಪೋಸ್ಟ್‌ಗಳನ್ನು ಬ್ಲಾಕ್ ಮಾಡುವ ಮೊದಲು ಕನಿಷ್ಠ ಇಬ್ಬರು ಹಿರಿಯ ಅಧಿಕಾರಿಗಳು ಪರಿಶೀಲಿಸುವ ವ್ಯವಸ್ಥೆ ಹಾಗೂ ಹೆಚ್ಚುವರಿ ಭದ್ರತೆ ನೀಡುವುದಾಗಿ ಮೆಟಾ ಭರವಸೆ ನೀಡಿದೆ.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಮುಖಾಮುಖಿ ವಿಚಾರಣೆಗಾಗಿ ಮೆಟಾ ಮತ್ತು ಇನ್‌ಸ್ಟಾಗ್ರಾಮ್‌ನ ಜಾಗತಿಕ ಮುಖ್ಯಸ್ಥರಿಗೆ ಸಮನ್ಸ್ ನೀಡಿದ್ದು, ಉನ್ನತ ಮಟ್ಟದ ಸಭೆ ನಡೆಯುವ ಸಾಧ್ಯತೆ ಇದೆ.

error: Content is protected !!
Scroll to Top