ಕಡಬ: ಅಡಿಕೆ ಮರಬಿದ್ದು ಕೂಲಿಕಾರ್ಮಿಕ ಮೃತ್ಯು

Death, deadbody, Waterfall

(ನ್ಯೂಸ್ ಕಡಬ) newskadaba.com ಕಡಬ, ಜು. 31. ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಜೋರಾಗಿ ಬೀಸಿದ ಗಾಳಿಗೆ ಅಡಿಕೆ ಮರ ಮುರಿದು ಮೈಮೇಲೆ ಬಿದ್ದ ಪರಿಣಾಮ ಕೂಲಿ ಕಾರ್ಮಿಕರೋರ್ವರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಗುತ್ತುಪಾಲು ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಮೃತ ವ್ಯಕ್ತಿಯನ್ನು ಕುಂತೂರು ಕೇವಳ ನಿವಾಸಿ ಯಾದವ ಗೌಡ (66ವ) ಎಂದು ಗುರುತಿಸಲಾಗಿದೆ. ಇವರು ಗುತ್ತುಪಾಲು ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜೋರಾಗಿ ಬೀಸಿದ ಗಾಳಿಗೆ ಅಡಿಕೆ ಮರವೊಂದು ಮೈಮೇಲೆ ಮುರಿದು ಬಿದ್ದಿದೆ. ಪರಿಣಾಮ ಗಂಭೀರ ಗಾಯಗೊಂಡ ಯಾದವ ಗೌಡ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ತೋಟದಲ್ಲಿ ಇತರೇ ಮೂವರು ಕಾರ್ಮಿಕರೂ ಕೆಲಸ ಮಾಡುತ್ತಿದ್ದು ಅಪಾಯದಿಂದ ಪಾರಾಗಿದ್ದಾರೆ. ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಗೆಕರೆದೊಯ್ಯಲಾಗಿದೆ.

Scroll to Top