ಸುಳ್ಯದ ನ್ಯಾಯವಾದಿ ಬಿ.ಎಸ್.ಶರೀಫ್ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.01. ನ್ಯಾಯವಾದಿ, ಸುಳ್ಯ ನಗರ ರೋಟರಿ ಕ್ಲಬ್ ಅಧ್ಯಕ್ಷ ಬಿ.ಎಸ್.ಶರೀಫ್ ತನ್ನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

ರಂಝಾನ್ ಸಮಯವಾದುದರಿಂದ ಬೆಳಿಗ್ಗೆ 4.30 ರ ನಂತರ ತನ್ನ ಅರಂಬೂರಿನಲ್ಲಿರುವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಿಗ್ಗೆ 8 ಗಂಟೆಯ ಕೃತ್ಯವು ಮನೆಯವರ ಗಮನಕ್ಕೆ ಬಂದಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊರಿಯರ್ ಉದ್ಯಮ ನಡೆಸುತ್ತಿದ್ದ ಶರೀಫ್ ಇತ್ತೀಚೆಗೆ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರೆನ್ನಲಾಗಿದ್ದು, ಅದೇ ಕಾರಣಕ್ಕೆ ಮಾಡಿರಬಹುದೆಂದು ಶಂಕಿಸಲಾಗಿದೆ. ಅವರು ಸುಳ್ಯ ಸಿಟಿ ರೋಟರಿ ಕ್ಲಬ್ ಅಧ್ಯಕ್ಷರಾಗಿ, ಜೇಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷರಾಗಿದ್ದ ಇವರು ಜೇಸಿಐ ರಾಷ್ಟ್ರೀಯ ತರಬೇತುದಾರರಾಗಿದ್ದರು. ಸುಳ್ಯ ಗ್ರೀನ್ ವ್ಯೂ ಸ್ಕೂಲ್ ಸಂಚಾಲಕರಾಗಿ, ಮೊಗರ್ಪಣೆ ಮಸೀದಿ ಉಪಾಧ್ಯಕ್ಷರಾಗಿದ್ದ ಅವರು ಹಲವು ಸಂಘಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು.

Also Read  ಕುಕ್ಕೆ ಸುಬ್ರಹ್ಮಣ್ಯ : ದೇವರಹಳ್ಳಿಯ ಮುಚ್ಚಲ್ಪಟ್ಟಿದ್ದ ಶಾಲೆಗೆ ಮತ್ತೆ ಮರು ಜೀವ

error: Content is protected !!
Scroll to Top