(ನ್ಯೂಸ್ ಕಡಬ) newskadaba.com, ಆ .05: ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ಅಸಲಿ ಸತ್ಯ ಹೊರತರಲು ಸಿಐಡಿ ತನಿಖೆಯನ್ನು ತೀವ್ರಗೊಳಿಸಿದೆ. ಕೆಪಿಎಸ್ಸಿ ಕಚೇರಿಯ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ ಪರೀಕ್ಷಾ ದಾಖಲೆಗಳು, OMR ಶೀಟ್ಗಳು ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನಿಸಲಾಗಿದೆ.
ಅಭ್ಯರ್ಥಿಗಳ OMR ಶೀಟ್ಗಳನ್ನು ತಿದ್ದುಪಡಿ ಮಾಡಲಾಗಿದೆ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು.ಅಭ್ಯರ್ಥಿಗಳ ಪ್ರತಿಭಟನೆ ಹಾಗೂ ದೂರುದಾರ ಮಂಜುನಾಥ್ ನೀಡಿರುವ ಹೇಳಿಕೆ ಆಧಾರದ ಮೇಲೆ, ಸತ್ಯಾಸತ್ಯತೆಯನ್ನು ತಾಂತ್ರಿಕವಾಗಿ ಸ್ಪಷ್ಟಪಡಿಸಿಕೊಳ್ಳಲು ಸಿಐಡಿ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
FSL ವರದಿ ಬಂದ ಬಳಿಕ ನೇಮಕಾತಿ ಅಕ್ರಮದ ಸಂಪೂರ್ಣ ಜಾಲ ಬಯಲಾಗುವ ನಿರೀಕ್ಷೆಯಿದೆ.








