ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬ್ರಾಹ್ಮಣರಿಗೆ ಸ್ವ -ಉದ್ಯಮ ನೇರ ಸಾಲ: ಅರ್ಜಿ ಆಹ್ವಾನ – News Kadaba

ಬ್ರಾಹ್ಮಣರಿಗೆ ಸ್ವ -ಉದ್ಯಮ ನೇರ ಸಾಲ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 07. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನೇರ ಸಾಲ ನೀಡಲು ಉದ್ದೇಶಿಸಿದೆ.  ಈ ಸಾಲ ಯೋಜನೆಯಲ್ಲಿ ಹಲವು ಉದ್ದಿಮೆ (ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಉದ್ಯಮ, ವ್ಯಾಪಾರ, ಇತ್ಯಾದಿ) ನಡೆಸಲು ರೂ.1 ಲಕ್ಷ ಹಾಗೂ ರೂ. 2 ಲಕ್ಷಗಳ ಸಾಲ ಒದಗಿಸಲು ಯೋಜನೆ ರೂಪಿಸಿದೆ.  ಈ ಮೊತ್ತದಲ್ಲಿ ಶೇ. 20ರಷ್ಟು ಸಹಾಯಧನ ಹಾಗೂ ಉಳಿಕೆ ಶೇ.80ರಷ್ಟು ಮೊತ್ತಕ್ಕೆ ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಮಂಡಳಿಯಿಂದ ನೇರವಾಗಿ ಸಾಲ ಮಂಜೂರು ಮಾಡಲಾಗುತ್ತದೆ.

ವಿಪ್ರ ಸ್ವ-ಉದ್ಯಮ ನೇರಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆ ದಿನ. https://ksbdb.co.in/Loan/ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ ಯೋಜನೆಯ ಉಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ದೂರವಾಣಿ ಸಂಖ್ಯೆ 8029605888, 8762249230 ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ (0824-2453222) ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top