ಬಂಟ್ವಾಳ: ನಿಯಮ ಮೀರಿ ಶಾಲಾ ಮಕ್ಕಳ ಸಾಗಾಟ; 13 ವಾಹನಗಳ ವಿರುದ್ಧ ಸಂಚಾರ ಪೊಲೀಸರ ತಪಾಸಣೆ, ಕೇಸ್ ದಾಖಲು



(ನ್ಯೂಸ್‌ ಕಡಬ) newskadaba.com, ಆ.10: ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಬಂಟ್ವಾಳ ಸಂಚಾರ ಪೊಲೀಸರು ನಡೆಸಿದ ವಿಶೇಷ ತಪಾಸಣಾ ಕಾರ್ಯಾಚರಣೆಯಲ್ಲಿ ನಿಯಮ ಉಲ್ಲಂಘಿಸಿ ಮಕ್ಕಳನ್ನು ಸಾಗಿಸುತ್ತಿದ್ದ ವಾಹನಗಳ ವಿರುದ್ಧ ಒಟ್ಟು 13 ಪ್ರಕರಣಗಳನ್ನು ದಾಖಲಿಸಲಾಗಿದೆ.ಬಂಟ್ವಾಳ ಟ್ರಾಫಿಕ್ ಎಸ್ಐ ಆದರ್ಶ್ ಅವರ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಯಿತು.







ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ 8 ವಾಹನಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ.ಅಗತ್ಯ ದಾಖಲೆಗಳನ್ನು ಹೊಂದಿರದಿರುವುದು ಹಾಗೂ ನಿಯಮ ಉಲ್ಲಂಘನೆಗಾಗಿ 5 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.






 

ಸಾಮರ್ಥ್ಯಕ್ಕಿಂತ ಹೆಚ್ಚು ಮಕ್ಕಳನ್ನು ಸಾಗಿಸುವುದರಿಂದ ಅಪಘಾತದ ಸಮಯದಲ್ಲಿ ಗಂಭೀರ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ. ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ಕರೆದೊಯ್ಯುವುದು ವಾಹನ ಮಾಲೀಕರು ಮತ್ತು ಚಾಲಕರ ಜವಾಬ್ದಾರಿಯಾಗಿದ್ದು, ಇಂತಹ ನಿಯಮ ಉಲ್ಲಂಘನೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಸಂಚಾರ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

error: Content is protected !!
Scroll to Top