ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು 10 ದಿನ ಪೊಲೀಸ್ ಕಸ್ಟಡಿಗೆ

(ನ್ಯೂಸ್‌ ಕಡಬ) newskadaba.com, ಆ.10: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು, ಉಡುಪಿ ನ್ಯಾಯಾಲಯವು ಇಬ್ಬರು ಆರೋಪಿಗಳನ್ನು 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ಉತ್ತರಾಖಂಡ ಮೂಲದ ಆಕಾಶ್ (ಅಲಿಯಾಸ್ ಅನ್ಮೋಲ್ ರಸ್ತೋಗಿ) ಹಾಗೂ ಬಿಹಾರದ ಜಿಯಾವುಲ್ಲಾ (ಅಲಿಯಾಸ್ ದೀಪಕ್) ಬಂಧಿತ ಆರೋಪಿಗಳಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದ ಇವರನ್ನು ಪ್ರಕರಣದ ತನಿಖಾಧಿಕಾರಿ, ಕಾಪು ಇನ್ಸ್‌ಪೆಕ್ಟರ್ ಅಜ್ಮತ್ ಅಲಿ ಸೋಮವಾರ ಕೋರ್ಟ್‌ಗೆ ಹಾಜರುಪಡಿಸಿದರು.

ಹೆಚ್ಚಿನ ವಿಚಾರಣೆ ಮತ್ತು ಆಳವಾದ ತನಿಖೆಗೆ ಆರೋಪಿಗಳ ವಶಕ್ಕೆ ನೀಡುವಂತೆ ಪೊಲೀಸರು ಸಲ್ಲಿಸಿದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶ ಪುರುಷೋತ್ತಮ್ ಅವರು, 10 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿ உத்தரവിಟ್ಟಿದ್ದಾರೆ.

Scroll to Top