ಕಾವೂರು: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರು ಹಠಾತ್ತನೆ ಬೆಂಕಿಯುಂಟಾಗಿ ಸುಟ್ಟು ಭಸ್ಮ ► ಶಾರ್ಟ್ ಸರ್ಕ್ಯೂಟ್ ಶಂಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.01. ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಾರೊಂದು ಹಠಾತ್ತನೆ ಉಂಟಾದ ಬೆಂಕಿಯಿಂದ ಉರಿದು ಭಸ್ಮವಾದ ಘಟನೆ ನಗರದ ಹೊರವಲಯದ ಕಾವೂರಿನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.

ಬಜ್ಪೆ ನಿವಾಸಿ ಜಯರಾಜ್ ಎಂಬವರು ತನ್ನ ಹ್ಯುಂಡೈ ಐ20 ಕಾರನ್ನು ಕಾವೂರಿನಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿ ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಹಠಾತ್ತನೆ ಕಾರಿನಲ್ಲಿ ಬೆಂಕಿಯುಂಟಾಗಿದ್ದು, ಕ್ಷಣಾರ್ಧದಲ್ಲಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿರಬಹುದೆಂದು ಶಂಕಿಸಲಾಗಿದ್ದು, ಕಾರಿನಲ್ಲಿ ಯಾರೂ ಇಲ್ಲದೆ ಇದ್ದುದರಿಂದ ಪ್ರಾಣಾಪಾಯ ತಪ್ಪಿದೆ.

Also Read  ನೆಲ್ಯಾಡಿ: ಮದುವೆಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಮಿನಿಬಸ್ ಪಲ್ಟಿ ➤ ನಾಲ್ವರು ಗಂಭೀರ, ಹತ್ತಕ್ಕೂ ಅಧಿಕ ಮಂದಿಗೆ ಗಾಯ

error: Content is protected !!
Scroll to Top