(ನ್ಯೂಸ್ ಕಡಬ) newskadaba.com, ಆ.13 ಸುಳ್ಯ: ನಗರದ ಹಳೇಗೇಟು ಬಳಿ ಅರಣ್ಯ ಇಲಾಖೆಗೆ ಸೇರಿದ ಬೊಲೆರೋ ಹಾಗೂ ಮಹೀಂದ್ರ ಜೀತೋ ವಾಹನದ ನಡುವೆ ರಸ್ತೆ ಅಪಘಾತ ಸಂಭವಿಸಿದೆ.
ಸುಳ್ಯದಿಂದ ಪೈಚಾರ್ ಕಡೆಗೆ ತೆರಳುತ್ತಿದ್ದ ಅರಣ್ಯ ಇಲಾಖೆಯ ಬೊಲೆರೋ ವಾಹನ ಹಾಗೂ ಮಡಿಕೇರಿ ಕಡೆಗೆ ಸಂಚರಿಸುತ್ತಿದ್ದ ಮಹೀಂದ್ರ ಜೀತೋ ವಾಹನಗಳ ನಡುವೆ ಮಾರ್ಗಮಧ್ಯೆ ಈ ಅಪಘಾತ ನಡೆದಿದೆ. ಘಟನೆ ತಿಳಿಯುತ್ತಿದ್ದಂತೆ ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಿಗೆ ಹಾನಿಯಾಗಿದ್ದು, ಪೊಲೀಸರು ರಸ್ತೆ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.








