ಸಮಸ್ತ ಪಬ್ಲಿಕ್ ಪರೀಕ್ಷಾ ಫಲಿತಾಂಶ ಪ್ರಕಟ ► ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸ – ಶೇ.100 ಫಲಿತಾಂಶ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ.02. ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ನಡೆಸಿದ 2018 ನೇ ಸಾಲಿನ ಪಬ್ಲಿಕ್ ಪರೀಕ್ಷಾ ಫಲಿತಾಂಶವು ಪ್ರಕಟ ಗೊಂಡಿದ್ದು, ಪರೀಕ್ಷೆ ಬರೆದ ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದ 5, 7, 10 ನೇ ತರಗತಿಗಳ ಎಲ್ಲಾ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದು ಉತ್ತೀರ್ಣರಾಗಿ ಶೇಕಡಾ ನೂರು ಫಲಿತಾಂಶ ದಾಖಲಾಗಿರುತ್ತದೆ.

5 ನೇ ತರಗತಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಅಸ್ನಝಿಯಾ (500 ರಲ್ಲಿ 492 )ತೇರ್ಗಡೆ ಹೊಂದಿದ್ದು , 4 ಮಂದಿ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ, 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಏಳನೇ ತರಗತಿಯಲ್ಲಿ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, 2 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ, 6 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 5 ವಿದ್ಯಾರ್ಥಿಗಳು ದ್ವೀತಿಯ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿರುತ್ತಾರೆ. ಹತ್ತನೇ ತರಗತಿಯಲ್ಲಿ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, 5 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಗೊಂಡು, ಒಂದು ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Also Read  ಎಸ್‌ವೈ‌ಎಸ್ ಮಾಣಿ ಸೆಂಟರ್ ನಿಂದ ಗಣರಾಜ್ಯೋತ್ಸವ ಆಚರಣೆ

error: Content is protected !!
Scroll to Top