ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಗುಟ್ಕಾ, ಪಾನ್ ಮಸಾಲಾ ನಿಷೇಧ ಆದೇಶ ಹಿಂಪಡೆಯಲು ಸಿಎಂ ಸೂಚನೆ – News Kadaba

ಗುಟ್ಕಾ, ಪಾನ್ ಮಸಾಲಾ ನಿಷೇಧ ಆದೇಶ ಹಿಂಪಡೆಯಲು ಸಿಎಂ ಸೂಚನೆ

(ನ್ಯೂಸ್‌ ಕಡಬ) newskadaba.com,  ಆ.14 : ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ, ಸಂಗ್ರಹ ಮತ್ತು ಮಾರಾಟವನ್ನು 1 ವರ್ಷದ ಅವಧಿಗೆ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಅಧಿಸೂಚನೆ ಹೊರಡಿಸಿದ್ದರು.

ಈ ನಿರ್ಧಾರಕ್ಕೆ ಕಾಂಗ್ರೆಸ್ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ನಿಷೇಧದಿಂದ ಏಳೆಂಟು ಜಿಲ್ಲೆಗಳ ಅಡಿಕೆ ಬೆಳೆಗಾರರ ಮೇಲೆ ತೀವ್ರ ಸೌಲಭ್ಯ/ಆರ್ಥಿಕ ಪರಿಣಾಮ ಬೀರಲಿದೆ ಎಂದು ಹಿರಿಯ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.

ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ, ತಮ್ಮ ಗಮನಕ್ಕೆ ತರದೆ ಈ ನಿರ್ಧಾರ ಕೈಗೊಂಡಿದ್ದಕ್ಕೆ ಆರೋಗ್ಯ ಇಲಾಖೆ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡ ಸಿಎಂ, ಗುಟ್ಕಾ ನಿಷೇಧ ಆದೇಶವನ್ನು ಶೀಘ್ರದಲ್ಲೇ ಹಿಂಪಡೆಯುವಂತೆ ಸೂಚಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಶೀಘ್ರದಲ್ಲೇ ಹೊರಬೀಳುವ ಸಾಧ್ಯತೆಯಿದೆ.

Scroll to Top