ಡಿಸಿ ನೇತೃತ್ವದಲ್ಲಿ ವಿವಿಧ ತಾಲೂಕುಗಳಲ್ಲಿ ಎಸ್ಸಿ / ಎಸ್ಟಿ ಕುಂದು ಕೊರತೆ ಸಭೆ



(ನ್ಯೂಸ್ ಕಡಬ) newskadaba.com ಆ. 14. ತಾಲೂಕು ಮಟ್ಟದ ಪರಿಶಿಷ್ಟ ಜಾತಿ /ಪರಿಶಿಷ್ಟ ವರ್ಗದ ಸಮುದಾಯದವರ ಕುಂದು ಕೊರತೆ ಬಗ್ಗೆ ಚರ್ಚಿಸಲು ಸಂಘ ಸಂಸ್ಥೆಯ ಪದಾಧಿಕಾರಿಗಳ ಸಭೆ ಜಿಲ್ಲಾಧಿಕಾರಿ  ದರ್ಶನ್ ಹೆಚ್.ವಿ ಅಧ್ಯಕ್ಷತೆಯಲ್ಲಿ ವಿವಿಧ ತಾಲೂಕುಗಳಲ್ಲಿ ನಡೆಯಲಿದೆ.
ಆಗಸ್ಟ್  18 – ಬಂಟ್ವಾಳ ತಾಲೂಕು ಮಟ್ಟದ ಪರಿಶಿಷ್ಟ ಜಾತಿ/ಪ.ಪಂಗಡದ ಕುಂದು ಕೊರತೆ ಸಭೆ ಬೆಳಿಗ್ಗೆ 11 ಗಂಟೆಗೆ ಬಂಟ್ವಾಳ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆಯಲಿದೆ.
ಆಗಸ್ಟ್ 20– ಬೆಳ್ತಂಗಡಿ ತಾಲೂಕು ಮಟ್ಟದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಮುಖಂಡರ ಕುಂದು ಕೊರತೆ ಸಭೆ ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಹಾಗೂ ಸುಳ್ಯ ತಾಲೂಕು ಮಟ್ಟದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಕುಂದು-ಕೊರತೆ ಸಭೆ ಮಧ್ಯಾಹ್ನ  3 ಗಂಟೆಗೆ ಸುಳ್ಯ ತಾಲೂಕು ಪಂಚಾಯತ್‍ ಸಭಾಂಗಣದಲ್ಲಿ ನಡೆಯಲಿದೆ.
ಆಗಸ್ಟ್ 21- ಪುತ್ತೂರು/ ಕಡಬ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಮಿತಿ ಸಭೆ ಬೆಳಿಗ್ಗೆ 11 ಗಂಟೆಗೆ  ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.







ಆದುದರಿಂದ ಈ ಸಭೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳು ಹಾಗೂ ಎಲ್ಲಾ ಇಲಾಖೆಯ ಅನುಷ್ಠಾನ ಅಧಿಕಾರಿಗಳು ಸಭೆಗೆ ಹಾಜರಾಗಿ ಸಲಹೆ ಸೂಚನೆಯನ್ನು ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.






error: Content is protected !!
Scroll to Top