ರೇಷನ್ ಕಾರ್ಡ್ ಇ-ಕೆವೈಸಿ ಮಾಡಲು ಆಹಾರ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com ಆ. 14.  ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಪಡೆಯುತ್ತಿರುವ ಫಲಾನುಭವಿಗಳ ಆಧಾರ್ ಸೀಡಿಂಗ್ ಮತ್ತು ಇ-ಕೆವೈಸಿಯನ್ನು ಸೆ. 30ರೊಳಗೆ ಪೂರ್ಣಗೊಳಿಸುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಆಯುಕ್ತರು ಸೂಚಿಸಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಇ-ಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ ಒಟ್ಟು 2,16,436 ಪಡಿತರ ಚೀಟಿಯಲ್ಲಿನ 6,62,195 ಫಲಾನುಭವಿಗಳ ಇ-ಕೆವೈಸಿ ಬಾಕಿಯಿದ್ದು, ತಾಲೂಕುವಾರು ಪಟ್ಟಿ ಈ ಕೆಳಕಂಡಂತಿದೆ. ಈ  ಪ್ರಕ್ರಿಯೆಯನ್ನು  ಪೂರ್ಣಗೊಳಿಸಲು ಕಡ್ಡಾಯವಾಗಿ ಇ-ಕೆವೈಸಿ ಮಾಡಲು ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ಸೂಚನೆಯನ್ನು ನೀಡಲಾಗಿದೆ. ತಪ್ಪಿದಲ್ಲಿ ಪಡಿತರ ಪಡೆಯಲು ಸಮಸ್ಯೆಯಾಗುತ್ತದೆ ಎಂದು  ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ ಪಡಿತರ ಚೀಟಿಯ ಫಲಾನುಭವಿಗಳ ತಾಲೂಕುವಾರು ವಿವರ

ಬಂಟ್ವಾಳ : ಇ-ಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ ಪಡಿತರ ಚೀಟಿಗಳು 45480, ಇ-ಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಸಂಖ್ಯೆ 141923,

ಬೆಳ್ತಂಗಡಿ: ಇ-ಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ ಪಡಿತರ ಚೀಟಿಗಳು 37532 ಇ-ಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಸಂಖ್ಯೆ 111798,

ಕಡಬ: ಇ-ಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ ಪಡಿತರ ಚೀಟಿಗಳು 15074, ಇ-ಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಸಂಖ್ಯೆ 43040,

ಮಂಗಳೂರು: ಇ-ಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ ಪಡಿತರ ಚೀಟಿಗಳು 38364, ಇ-ಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಸಂಖ್ಯೆ 116437,

ಮೂಡಬಿದ್ರೆ: ಇ-ಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ ಪಡಿತರ ಚೀಟಿಗಳು 11365, ಇ-ಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಸಂಖ್ಯೆ 33252,

ಮುಲ್ಕಿ: ಇ-ಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ ಪಡಿತರ ಚೀಟಿಗಳು 8055, ಇ-ಕೆವೈಸಿ  ದೃಢೀಕರಿಸಿ 5 ವರ್ಷ ಪೂರೈಸಿದ ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಸಂಖ್ಯೆ 23617,

ಪುತ್ತೂರು: ಇ-ಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ ಪಡಿತರ ಚೀಟಿಗಳು 22116, ಇ-ಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಸಂಖ್ಯೆ 69304,

ಸುಳ್ಯ: ಇ-ಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ ಪಡಿತರ ಚೀಟಿಗಳು: 14247, ಇ-ಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಸಂಖ್ಯೆ 41630,

ಉಳ್ಳಾಲ: ಇ-ಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ ಪಡಿತರ ಚೀಟಿಗಳು 24203, ಇ-ಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಸಂಖ್ಯೆ 81194.

Scroll to Top