(ನ್ಯೂಸ್ ಕಡಬ) newskadaba.com, ಆ.19ತಾಂತ್ರಿಕವಾಗಿ ಸವಾಲಿನಿಂದ ಕೂಡಿದ ಪಶ್ಚಿಮ ಘಟ್ಟದ ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ನಡೆಸಲಾಗಿದ್ದು, ಅಧಿಕಾರಿಗಳು ಇದರ ಕಾರ್ಯಾಚರಣೆ ಹಾಗೂ ಸುರಕ್ಷತಾ ಅಂಶಗಳನ್ನು ಪರಿಶೀಲಿಸಿದರು.
ದಕ್ಷಿಣ ಪಶ್ಚಿಮ ರೈಲ್ವೆಯ ಪ್ರಧಾನ ವ್ಯವಸ್ಥಾಪಕ (GM) ಪಿ. ಅನಂತ್ ಹಾಗೂ ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ (DRM) ಮುದಿತ್ ಮಿತ್ತಲ್ ಅವರು ಸ್ಥಳದಲ್ಲಿದ್ದು, ರೈಲ್ವೇ ಮೂಲಸೌಕರ್ಯದ ಸಿದ್ಧತೆಯನ್ನು ಅವಲೋಕಿಸಿದರು.’ಅಮೃತ್ ಭಾರತ್ ಸ್ಟೇಷನ್’ ಯೋಜನೆಯಡಿ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಿಲ್ದಾಣಗಳ ಪುನರಾಭಿವೃದ್ಧಿ ಹಾಗೂ ಪ್ಲಾಟ್‌ಫಾರ್ಮ್ ಸೌಲಭ್ಯಗಳ ಕಾಮಗಾರಿಯನ್ನು ಅಧಿಕಾರಿಗಳು ಪರಿಶೀಲಿಸಿದರು.
ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು, ಪ್ರಯಾಣಿಕರ ಅನುಕೂಲ ಹಾಗೂ ಸುರಕ್ಷತೆಗೆ ಆದ್ಯತೆ ನೀಡಲು ಸಂಬಂಧಪಟ್ಟ ಎಲ್ಲ ವಿಭಾಗಗಳಿಗೆ ಪ್ರಧಾನ ವ್ಯವಸ್ಥಾಪಕರು ಸೂಚಿಸಿದರು.








