ಕಾಸರಗೋಡು: ಟ್ಯಾಂಕರ್ ಲಾರಿ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

(ನ್ಯೂಸ್‌ ಕಡಬ) newskadaba.com,  ಆ.20:  ಕಾಸರಗೋಡಿನ ಎಂ.ಜಿ. ರಸ್ತೆಯ ಹೊಸ ಬಸ್ ನಿಲ್ದಾಣದ ಬಳಿ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರನ್ನು ತಳಂಗರ ಬಾಂಗೋಡ್ ನ ಹನೀಫ್ (55) ಎಂದು ಗುರುತಿಸಲಾಗಿದೆ.

ಅಪಘಾತದ ರಭಸಕ್ಕೆ ರಸ್ತೆಗೆ ಬಿದ್ದ ಹನೀಫ್ ಅವರ ಕಾಲಿನ ಮೇಲೆ ಲಾರಿ ಹರಿದು ಗಂಭೀರ ಗಾಯಗೊಂಡಿದ್ದರು.ಸ್ಥಳೀಯರು ತಕ್ಷಣ ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಿ, ಬಳಿಕ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

Scroll to Top