(ನ್ಯೂಸ್ ಕಡಬ) newskadaba.com, ಆ.20: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಎಕ್ಸ್‌ಪ್ರೆಸ್ ಬಸ್ !ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರು ಸಮೀಪ ಗುರುವಾರ ಬೆಳಗ್ಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ಏಕಾಏಕಿ ಬೆಂಕಿಗೆ ಆಹುತಿಯಾಗಿದೆ.
ಬಸ್ ಉಡುಪಿಯಿಂದ ಶಿವಮೊಗ್ಗ ಜಿಲ್ಲೆಯ ಸಾಗರದತ್ತ ತನ್ನ ಎಂದಿನ ಸಂಚಾರದಲ್ಲಿದ್ದ ವೇಳೆ ಈ ಘಟನೆ ಸಂಭವಿಸಿದೆ. ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನೆ ವೇಳೆ ಪ್ರಯಾಣಿಕರ ಸುರಕ್ಷತೆ ಹಾಗೂ ಹಾನಿಯ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.








