ಬಂಟ್ವಾಳದಲ್ಲಿ ಹಾಡಹಗಲೇ ಭೀಕರ ದರೋಡೆ: ₹8 ಲಕ್ಷಕ್ಕೂ ಅಧಿಕ ನಗದು ದೋಚಿ ಪರಾರಿಯಾದ ಮುಸುಕುಧಾರಿಗಳು!

(ನ್ಯೂಸ್‌ ಕಡಬ) newskadaba.com,  ಆ.20: ಬಂಟ್ವಾಳದ ಗ್ರಾಮೀಣ ಭಾಗದ ಮುಲ್ಕಾಜೆ ಮಾಡದಲ್ಲಿ ಬೈಕ್ ಸವಾರನನ್ನು ಅಡ್ಡಗಟ್ಟಿ ಹಾಡಹಗಲೇ ಭೀಕರ ದರೋಡೆ ನಡೆಸಲಾಗಿದೆ.ಸುರತ್ಕಲ್ ನಿವಾಸಿ ಮಯ್ಯದಿ. ವಿವಿಧ ಅಂಗಡಿಗಳಿಂದ ಸಿಮೆಂಟ್ ಪೂರೈಕೆಯ ಹಣ ವಸೂಲಿ ಮಾಡಿ ಬೈಕ್‌ನಲ್ಲಿ ಹಿಂತಿರುಗುತ್ತಿದ್ದಾಗ ಈ ದಾಳಿ ನಡೆದಿದೆ.ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ಮುಸುಕುಧಾರಿಗಳು ಮಯ್ಯದಿಯವರನ್ನು ಅಡ್ಡಗಟ್ಟಿ, ತಲವಾರು ತೋರಿಸಿ ಬೆದರಿಸಿ ಹಣದ ಬ್ಯಾಗ್ ದೋಚಿ ಪರಾರಿಯಾಗಿದ್ದಾರೆ.

ಬ್ಯಾಗ್‌ನಲ್ಲಿ ಸುಮಾರು ₹8 ಲಕ್ಷಕ್ಕೂ ಅಧಿಕ ನಗದು ಹಣವಿತ್ತು ಎಂದು ಶಂಕಿಸಲಾಗಿದೆ.ಬಂಟ್ವಾಳ ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್ ಅನಂತ ಪದ್ಮನಾಭ ಹಾಗೂ ಎಸ್‌ಐ ಮಂಜುನಾಥ್ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಆರೋಪಿಗಳ ಪತ್ತೆಗಾಗಿ ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ಚುರುಕುಗೊಳಿಸಲಾಗಿದೆ.

Scroll to Top