ನಕಲಿ ಔಷಧ ಜಾಲಕ್ಕೆ ಬ್ರೇಕ್: ಸಿ. ವಂಶಿಕೃಷ್ಣ ನೇತೃತ್ವದಲ್ಲಿ ಎಸ್‌ಐಟಿ ತನಿಖೆಗೆ ಆದೇಶ

(ನ್ಯೂಸ್‌ ಕಡಬ) newskadaba.com,  ಆ.21: ಬೆಂಗಳೂರು ದಕ್ಷಿಣದ ದೊಡ್ಡೇರಿ ಹಾಗೂ ಬಿದದಿ ಸಮೀಪದ ಕುರುಬರಹಳ್ಳಿಯಲ್ಲಿ ಬಹುಕೋಟಿ ಮೌಲ್ಯದ ಬೃಹತ್ ನಕಲಿ ಔಷಧ ತಯಾರಿಕಾ ಮತ್ತು ಪೂರೈಕೆ ಜಾಲ ಪತ್ತೆಯಾಗಿದೆ.

ಆಗಸ್ಟ್ 18ರಂದು ಕರ್ನಾಟಕ ಡ್ರಗ್ ಎನ್‌ಫೋರ್ಸ್‌ಮೆಂಟ್ ವಿಂಗ್ ನಡೆಸಿದ ದಾಳಿಯಲ್ಲಿ ಸುಮಾರು 5.05 ಕೋಟಿ ರೂ. ಮೌಲ್ಯದ ನಕಲಿ ಔಷಧಗಳು, ಯಂತ್ರೋಪಕರಣಗಳು ಹಾಗೂ ಲೇಬಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.ಪ್ರತಿಷ್ಠಿತ MNC ಕಂಪನಿಗಳ ಹೆಸರಿನಲ್ಲಿ ಜೀವಕ್ಕೆ ಅಪಾಯ ತರುವ ನಕಲಿ ಇಂಜೆಕ್ಷನ್‌ ಹಾಗೂ ಮಾತ್ರೆಗಳನ್ನು ಈ ಅಂತಾರಾಜ್ಯ ಜಾಲ ಪೂರೈಸುತ್ತಿತ್ತು..

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ತನಿಖೆಗಾಗಿ ಐಪಿಎಸ್ ಅಧಿಕಾರಿ ಸಿ. ವಂಶಿಕೃಷ್ಣ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (SIT) ರಚಿಸಿ ಆದೇಶಿಸಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ಬಂಧಿಸಲಾಗಿದ್ದು, ಮುಖ್ಯ ಸೂತ್ರಧಾರ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ.

Scroll to Top