ಪಿಂಚಣಿದಾರರಿಗೆ ಸರ್ಕಾರದ ಬಿಗ್ ರಿಲೀಫ್: ₹32,000 ರಿಂದ ₹1,20,000 ಕ್ಕೆ ಏರಿಕೆಯಾದ ಆದಾಯ ಮಿತಿ!



(ನ್ಯೂಸ್‌ ಕಡಬ) newskadaba.com,  ಆ.21: ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳ ವಾರ್ಷಿಕ ಆದಾಯ ಮಿತಿಯನ್ನು ₹32,000 ರಿಂದ ₹1,20,000 ಕ್ಕೆ ಹೆಚ್ಚಿಸಿ ಸರ್ಕಾರ ಆದೇಶ.ಭೌತಿಕ ಪರಿಶೀಲನೆ ನಂತರ ₹1.20 ಲಕ್ಷದೊಳಗಿನ ವಾರ್ಷಿಕ ಆದಾಯ ಹೊಂದಿರುವ ಅರ್ಹ ಫಲಾನುಭವಿಗಳಿಗೆ ಪಿಂಚಣಿ ಸೌಲಭ್ಯ ಪುನರಾರಂಭ.







‘ಸಂಯೋಜನೆ’ ಮೊಬೈಲ್ ಆ್ಯಪ್ ಮೂಲಕ ನಡೆಸಿದ ಪರಿಶೀಲನೆಯಲ್ಲಿ 23,14,544 ಸಂದೇಹಾಸ್ಪದ ಖಾತೆಗಳು ಪತ್ತೆಯಾಗಿದ್ದವು.ಸೂಕ್ತ ದಾಖಲೆ ಹಾಗೂ ವಿಳಾಸ ನೀಡದ ಕಾರಣ 18,06,032 ಮಂದಿಯ ಪಿಂಚಣಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿತ್ತು.






ಗ್ರಾಮ ಆಡಳಿತಾಧಿಕಾರಿಗಳ ವರದಿ ಆಧಾರದ ಮೇಲೆ ತಹಸೀಲ್ದಾರರು ನಿಯಮಾನುಸಾರ ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಪಿಂಚಣಿ ಬಿಡುಗಡೆ ಮಾಡಲು ಆದೇಶ.ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳು.

ವರ್ಷಗಳಿಂದ ₹32,000 ಆದಾಯ ಮಿತಿಯಿದ್ದ ಕಾರಣ ಲಕ್ಷಾಂತರ ಬಡವರು ಸೌಲಭ್ಯದಿಂದ ವಂಚಿತರಾಗಿದ್ದರು; ಈಗ ಆದಾಯ ಮಿತಿ ಏರಿಕೆಯಿಂದ ಲಕ್ಷಾಂತರ ಕುಟುಂಬಗಳಿಗೆ ನೇರ ಲಾಭ.

ಅರ್ಹ ಫಲಾನುಭವಿಗಳಿಗೆ ತೊಂದರೆಯಾಗದಂತೆ ತಾಲೂಕು ಮಟ್ಟದಲ್ಲಿ ತಹಸೀಲ್ದಾರರ ಮೂಲಕ ಮರುಪರಿಶೀಲನೆ ನಡೆಸಿ ಪಿಂಚಣಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.

error: Content is protected !!
Scroll to Top