ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ರೈಲು ಜಾಲ ಸೇರ್ಪಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ



(ನ್ಯೂಸ್‌ ಕಡಬ) newskadaba.com,  ಆ.22:ದಕ್ಷಿಣ ಕನ್ನಡ ಜನರ ಬಹುಕಾಲದ ಬೇಡಿಕೆಯಾಗಿದ್ದ ಮಂಗಳೂರು ಭಾಗದ ರೈಲ್ವೆ ಜಾಲವನ್ನು ದಕ್ಷಿಣ ರೈಲ್ವೆಯಿಂದ ಪ್ರತ್ಯೇಕಿಸಿ, ನೈಋತ್ಯ ರೈಲ್ವೆ ವಲಯಕ್ಕೆ ಒಳಪಟ್ಟ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲು ರೈಲ್ವೆ ಸಚಿವಾಲಯ ಒಪ್ಪಿಗೆ ನೀಡಿದೆ. ಶೀಘ್ರದಲ್ಲೇ ಈ ಕುರಿತು ಅಧಿಕೃತ ಗೆಜೆಟೆಡ್ ನೋಟಿಫಿಕೇಶನ್ ಹೊರಬೀಳಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ







ಮಂಗಳೂರು ರೈಲ್ವೆ ಜಾಲವು ದಕ್ಷಿಣ ರೈಲ್ವೆ ಹಾಗೂ ನೈಋತ್ಯ ರೈಲ್ವೆ ನಡುವೆ ಹಂಚಿಹೋಗಿದ್ದರಿಂದ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹೊಸ ರೈಲುಗಳ ಸೇರ್ಪಡೆಗೆ ಆಡಳಿತಾತ್ಮಕ ತೊಡಕುಗಳು ಉಂಟಾಗುತ್ತಿದ್ದವು.2024ರಲ್ಲಿ ಅಧಿಕಾರ ವಹಿಸಿಕೊಂಡ ನಂತರ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರಾಜ್ಯ ಸಚಿವ ವಿ. ಸೋಮಣ್ಣ ಹಾಗೂ ಲೋಕಸಭೆಯ ವಿವಿಧ ವೇದಿಕೆಗಳಲ್ಲಿ ನಿರಂತರವಾಗಿ ಈ ವಿಷಯವನ್ನು ಪ್ರಸ್ತಾಪಿಸಿ ಈಡೇರಿಸಿದ್ದಾರೆ.






ಈ ಬದಲಾವಣೆಯಿಂದ ಆಡಳಿತಾತ್ಮಕ ಗೊಂದಲಗಳು ನಿವಾರಣೆಯಾಗಿ, ಪ್ರಯಾಣಿಕರ ಕುಂದುಕೊರತೆಗಳ ಶೀಘ್ರ ವಿಲೇವಾರಿ ಹಾಗೂ ಕರಾವಳಿ ಭಾಗದಲ್ಲಿ ರೈಲ್ವೆ ಮೂಲಸೌಕರ್ಯ ವಿಸ್ತರಣೆಗೆ ಹೊಸ ಚಾಲನೆ ಸಿಗಲಿದೆ.ಈ ಐತಿಹಾಸಿಕ ತೀರ್ಮಾನ ಕೈಗೊಂಡ ಪ್ರಧಾನಮಂತ್ರಿ ನರೇಂದ್ರ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ವಿ. ಸೋಮಣ್ಣ ಅವರಿಗೆ ಸಂಸದರು ದಕ್ಷಿಣ ಕನ್ನಡದ ಜನತೆಯ ಪರವಾಗಿ ಧನ್ಯವಾದ ಅರ್ಪಿಸಿದ್ದಾರೆ.

error: Content is protected !!
Scroll to Top