ರಾಜ್ಯದಲ್ಲಿ 1,000 ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಸ್ಥಾಪನೆ: ಸಚಿವ ಮಧು ಬಂಗಾರಪ್ಪ



(ನ್ಯೂಸ್‌ ಕಡಬ) newskadaba.com,  ಆ.22  ಶಿವಮೊಗ್ಗ: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಆವರಣದಲ್ಲಿ ದ್ವಿಭಾಷಾ (ಕನ್ನಡ-ಇಂಗ್ಲಿಷ್) ಶಿಕ್ಷಣ ನೀಡುವ 1,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ನಿರ್ಮಿಸಲು ಸರ್ಕಾರ ಉದ್ದೇಶಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.







ಮುಂದಿನ 2 ವರ್ಷಗಳಲ್ಲಿ 500 KPS ಶಾಲೆಗಳನ್ನು ಲೋಕಾರ್ಪಣೆಗೊಳಿಸುವ ಗುರಿ ಹೊಂದಲಾಗಿದೆ.ರಾಜ್ಯ ಸರ್ಕಾರದ 750 ಕೋಟಿ ರೂ. ಪೂರಕ ನಿಧಿ ಹಾಗೂ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ADB) ಆರ್ಥಿಕ ನೆರವಿನೊಂದಿಗೆ ಒಟ್ಟು 1,750 ಕೋಟಿ ರೂ. ವೆಚ್ಚದಲ್ಲಿ ಮುಂದಿನ 4 ವರ್ಷಗಳಲ್ಲಿ ಯೋಜನೆ ಪೂರ್ಣಗೊಳ್ಳಲಿದೆ.






ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 75,000 ಹುದ್ದೆಗಳ ಪೈಕಿ ಈಗಾಗಲೇ 15,000 ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.1000 KPS ಶಾಲೆಗಳ ಜೊತೆಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿಧಿಯಿಂದ ಉರ್ದು ಸೇರಿದಂತೆ ದ್ವಿಭಾಷಾ KPS ಶಾಲೆಗಳನ್ನು ಆರಂಭಿಸಲಾಗುವುದು.

error: Content is protected !!
Scroll to Top