(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. 2026-27ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ (ಕೇವಲ ವೃತ್ತಿಪರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನ. ರಾಜ್ಯ ಹಾಸ್ಟೆಲ್ ಪೋರ್ಟಲ್ https://shp.karnataka.gov.in/ ಮೂಲಕ ಆನ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‍ಸೈಟ್ https://dom.karnataka.gov.in ಅಥವಾ ಹತ್ತಿರದ ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ತಾಲೂಕು ವಿಸ್ತರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ








