(ನ್ಯೂಸ್ ಕಡಬ) newskadaba.com ಆ. 24. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮತ್ತು ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿ, ಮಂಗಳೂರು ಇವರ ಸಹಕಾರದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಗಸ್ಟ್ 28 ರಂದು ಸಂಜೆ 4 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯಲಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಜ್ ಮತ್ತು ವಕ್ಫ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.
ಉಡುಪಿ ರಾಜ್ಯಶಾಸ್ತ್ರ ಉಪನ್ಯಾಸಕ ದಯಾನಂದ ಕರ್ಕೇರ ಉಗ್ಗೆಲ್ ಬೆಟ್ಟು ಜಯಂತಿ ಸಂದೇಶವನ್ನು ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 28: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ








