ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರಿ ಮಳೆ: ದರ್ಪಣ ತೀರ್ಥ ಉಕ್ಕಿ ಹರಿದು ಆದಿ ಸುಬ್ರಹ್ಮಣ್ಯ ದೇವಾಲಯ ಜಲಾವೃತ

(ನ್ಯೂಸ್‌ ಕಡಬ) newskadaba.com,  ಆ.26: ಕುಕ್ಕೆ ಸುಬ್ರಹ್ಮಣ್ಯ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕುಮಾರಧಾರ ಹಾಗೂ ದರ್ಪಣ ತೀರ್ಥ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಹಲವೆಡೆ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದೆ.

ದರ್ಪಣ ತೀರ್ಥ ನದಿ ಉಕ್ಕಿ ಹರಿದಿದ್ದರಿಂದ ಆದಿ ಸುಬ್ರಹ್ಮಣ್ಯ ದೇವಾಲಯದ ಅಂಗಳಕ್ಕೆ ನೀರು ನುಗ್ಗಿದ್ದು, ಭಕ್ತರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದರು..ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಸ್ನಾನಘಟ್ಟ ಮುಳುಗುವಷ್ಟು ಏರದ ಕಾರಣ ಭಕ್ತರು ಪವಿತ್ರ ಸ್ನಾನ ಮಾಡಲು ಸಾಧ್ಯವಾಯಿತು.

Scroll to Top