(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದ ಕರ್ನಾಟಕ ವೃತ್ತಿ ಶಿಕ್ಷಣ ಅಭಿವೃದ್ಧಿ ನಿಗಮ (KVTSDC) ನಿಗಮವು ಅಂತರಾಷ್ಟ್ರೀಯ ನೇಮಕಾತಿ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ “ವಿದೇಶದಲ್ಲಿ ಅಧ್ಯಯನ-2026” ಕಾರ್ಯಕ್ರಮವನ್ನು ಸೆಪ್ಟೆಂಬರ್ 6 ರಂದು ಬೆಳಿಗ್ಗೆ 9:30 ರಿಂದ ಬೆಂಗಳೂರಿನ ಗಾಯತ್ರಿ ವಿಹಾರ್ ಅರಮನೆ ಮೈದಾನದ ಗಾಯತ್ರಿ ಗ್ರ್ಯಾಂಡ್ ಗೇಟ್ ನಂ.4 ರಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ 10ಕ್ಕೂ ಹೆಚ್ಚು ದೇಶಗಳ 75ಕ್ಕೂ ಹೆಚ್ಚು ವಿಶ್ವವಿದ್ಯಾನಿಲಯಗಳು ಭಾಗವಹಿಸುತ್ತಿದ್ದು, ಉನ್ನತ ಶಿಕ್ಷಣಕ್ಕಾಗಿ ವಿದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ವಿದೇಶಿ ಅಧ್ಯಯನದ ಅವಕಾಶಗಳು, ಪ್ರವೇಶ ಪ್ರಕ್ರಿಯೆಗಳು, ವಿದ್ಯಾರ್ಥಿ ವೀಸಾ ಮಾಹಿತಿ ಮತ್ತು ವಿದ್ಯಾರ್ಥಿವೇತನದ ಬಗ್ಗೆ ಮಾಹಿತಿಯನ್ನು ಒಂದೇ ವೇದಿಕೆಯಡಿ ಒದಗಿಸಲು ಉದ್ದೇಶಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ವೆಬ್‍ಸೈಟ್ https://studyabroad.ksdckarnataka.com ನಲ್ಲಿ ಸೆಪ್ಟೆಂಬರ್ 5 ರೊಳಗೆ ನೋಂದಾಯಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-29522222 ಸಂಪರ್ಕಿಸಲು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












