ನೇಪಾಳ ಪ್ರವಾಹ: ಸಿಲುಕಿರುವ ಕನ್ನಡಿಗರ ಪತ್ತೆಗೆ ಸರ್ಕಾರದ ಕ್ರಮ



(ನ್ಯೂಸ್ ಕಡಬ) newskadaba.com . 27. ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ಹಾಗೂ ಮಾಹಿತಿ ಸಂಗ್ರಹಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ.







ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ಮತ್ತು ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಹಲವು ಭಾರತೀಯರು ನಾಪತ್ತೆಯಾಗಿರುವ ವರದಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ರಕ್ಷಣಾ ಕಾರ್ಯಕ್ಕೆ ಸಜ್ಜಾಗಿದೆ.






 

ನೇಪಾಳ ಅಥವಾ ಟಿಬೆಟ್ ಸ್ವಾಯತ್ತ ಪ್ರದೇಶದಲ್ಲಿ ಸಿಲುಕಿರುವ ಕನ್ನಡಿಗರು ಹಾಗೂ ಅವರ ಕುಟುಂಬಸ್ಥರ ವಿವರಗಳನ್ನು ಕಲೆಹಾಕಲಾಗುತ್ತಿದೆ. ನೇಪಾಳ ಅಥವಾ ಟಿಬೆಟ್ ಭಾಗದಲ್ಲಿ ತಮ್ಮ ಸಂಬಂಧಿಕರು, ಸ್ನೇಹಿತರು ಅಥವಾ ಪರಿಚಿತರು ಸಿಲುಕಿಕೊಂಡಿದ್ದರೆ, ಅವರ ವಿವರಗಳನ್ನು ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ಅಥವಾ ಪ್ರಾಧಿಕಾರಕ್ಕೆ ಒದಗಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ಈ ಸಂಬಂಧ ಗೂಗಲ್‌ ಡಾಕ್ಸ್‌ನಲ್ಲಿ ವಿವರ ತುಂಬುವಂತೆ ಮಾಹಿತಿ ಕೋರಲಾಗಿದೆ.

error: Content is protected !!
Scroll to Top