ನಿಲ್ಲಿಸಿದ್ದ ಟಿಟಿ ಮೇಲೆ ಲಾರಿ ಪಲ್ಟಿ- ಮೂವರು ಗಂಭೀರ



(ನ್ಯೂಸ್ ಕಡಬ) newskadaba.com . 27. ಲಾರಿಯೊಂದು ನಿಯಂತ್ರಣ ತಪ್ಪಿ ನಿಂತಿದ್ದ ಟೆಂಪೋ ಟ್ರಾವೆಲರ್ (ಟಿಟಿ) ಮೇಲೆ ಉರುಳಿ ಬಿದ್ದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಅರಂತೋಡಿನ ದೇವರಕೊಲ್ಲಿ ಬಳಿ ಬುಧವಾರ ಸಂಜೆ ನಡೆದಿದೆ.







ಮೂಲಗಳ ಪ್ರಕಾರ, ಗುಜರಾತ್‌ ಅಹಮದಾಬಾದ್‌ನ ಪ್ರವಾಸಿಗರ ಗುಂಪೊಂದು ಮಡಿಕೇರಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ದೇವರಕೊಲ್ಲಿ ಅಬ್ಬಿ ಜಲಪಾತದ ಬಳಿ ರಸ್ತೆಬದಿಯಲ್ಲಿ ತಮ್ಮ ಟಿಟಿ ವಾಹನವನ್ನು ನಿಲ್ಲಿಸಿದ್ದಾಗ ಈ ಅಪಘಾತ ಸಂಭವಿಸಿದೆನ್ನಲಾಗಿದೆ.






ಸುಳ್ಯದ ಕಡೆಗೆ ಚಲಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಉರುಳಿಬಿದ್ದಿದೆ. ಟಿಟಿಯೊಳಗಿದ್ದ ಏಳು ಪ್ರವಾಸಿಗರ ಪೈಕಿ ಓರ್ವ ಪ್ರಯಾಣಿಕ ಗಂಭೀರ ಗಾಯಗೊಂಡಿದ್ದಾನೆ ಎನ್ನಲಾಗಿದೆ.

ತಕ್ಷಣವೇ ಗಾಯಾಳುಗಳನ್ನು ಆಂಬ್ಯುಲೆನ್ಸ್‌ಗಳ ಮೂಲಕ ಸುಳ್ಯದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಕ್ರೇನ್ ಮೂಲಕ ಉರುಳಿಬಿದ್ದ ಲಾರಿಯನ್ನು ಮೇಲಕ್ಕೆತ್ತಿ ಹೆದ್ದಾರಿಯನ್ನು ತೆರವುಗೊಳಿಸಲಾಯಿತು.

 

error: Content is protected !!
Scroll to Top