ನಟ ದೇವರಾಜ್ 2ನೇ ಪುತ್ರ ಪ್ರಣಮ್ ನಿಶ್ಚಿತಾರ್ಥ!!



(ನ್ಯೂಸ್ ಕಡಬ) newskadaba.com ಆ. 27. ಸ್ಯಾಂಡಲ್‌ವುಡ್‌ನ ಹಿರಿಯ ನಟ ಹಾಗೂ ಡೈನಮಿಕ್ ಸ್ಟಾರ್ ದೇವರಾಜ್ ಅವರ ಎರಡನೇ ಪುತ್ರ, ನಟ ಪ್ರಣಮ್ ದೇವರಾಜ್ ಅವರು ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಟ್ಟಿದ್ದು, ನಮಿತಾ ಗೋಪಾಲ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.







ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದ್ದು, ಈ ಶುಭ ಸಮಾರಂಭದ ವಿಡಿಯೋ ಹಾಗೂ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.






ನಿಶ್ಚಿತಾರ್ಥದ ಸಂದರ್ಭದಲ್ಲಿ ಪ್ರಣಮ್ ದೇವರಾಜ್ ಮತ್ತು ನಮಿತಾ ಗೋಪಾಲ್ ಪರಸ್ಪರ ಉಂಗುರ ಬದಲಾಯಿಸಿಕೊಂಡಿದ್ದು, ಕುಟುಂಬಸ್ಥರು ಹಾಗೂ ಆಪ್ತರು ನವಜೋಡಿಗೆ ಶುಭ ಹಾರೈಸಿದ್ದಾರೆ.

error: Content is protected !!
Scroll to Top