(ನ್ಯೂಸ್ ಕಡಬ) newskadaba.com ಆ. 27. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ಸೆ.12 ರ ಬದಲು ಸೆ.19 ರಂದು ಮಧ್ಯಾಹ್ನ 2 ರಿಂದ ಸಂಜೆ 5.30 ರ ವರೆಗೆ ರಾಜ್ಯಾದಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ತನ್ನು ಆಯೋಜಿಸಿದೆ.
ಸಾರ್ವಜನಿಕರು ನ್ಯಾಯಾಲಯಗಳಲ್ಲಿ ದಾಖಲಾಗದೆ ಇರುವ, ದಾಖಲಾಗಿ ತೀರ್ಮಾನಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಲು ಇದೊಂದು ಸುವರ್ಣ ಅವಕಾಶವಾಗಿದೆ. ಈ ರೀತಿ ರಾಜೀಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು ಹಾಗೂ ಆದೇಶದ ವಿರುದ್ಧ ಮೇಲ್ಮನವಿ ಇರುವುದಿಲ್ಲ. ಕಡಿಮೆ ಖರ್ಚಿನಲ್ಲಿ ತ್ವರಿತ ಹಾಗು ಶಾಶ್ವತ ನ್ಯಾಯ ಪಡೆದುಕೊಂಡು ತಮ್ಮ ಸಮಯ ಹಾಗೂ ಸಂಬಂಧಗಳನ್ನು ಉಳಿಸಿಕೊಳ್ಳಲು ಇದೊಂದು ವಿಶೇಷ ಅವಕಾಶವಾಗಿದೆ.
ಉಚಿತ ಕಾನೂನು ಸಲಹೆಗಾಗಿ NALSA-15100 ಗೆ ಕರೆ ಮಾಡಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








