(ನ್ಯೂಸ್ ಕಡಬ) newskadaba.com ಆ. 30. ಕಾಮಿಡಿ ಕಿಂಗ್ ಎಂದೇ ಗುರುತಿಸಿಕೊಂಡಿರುವ ಸ್ಯಾಂಡಲ್‌ವುಡ್ ಹಾಸ್ಯ ನಟ ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ. ಉದ್ಯಮಿ ಪಾವನಾ ಗೌಡ ಜೊತೆ ಸಪ್ತಪದಿ ತುಳಿಯಲಿದ್ದಾರೆ. ಮದುವೆಗೂ ಮೊದಲು ಇಂದು ಮೈಸೂರಿನ ಸ್ಪೆಕ್ಟ್ರಮ್ ಹಾಲ್‌ನಲ್ಲಿ ಅದ್ಧೂರಿ ರೆಸೆಪ್ಶನ್ ಆಯೋಜಿಸಲಾಗಿದೆ. ಆರತಕ್ಷತೆ ಕಾರ್ಯಕ್ರಮದಲ್ಲಿ ಚಿಕ್ಕಣ್ಣ ಹಾಗೂ ಪಾವನಾ ಗೌಡ ಜೋಡಿ ಎಲ್ಲರ ಗಮನಸಳೆದಿದ್ದಾರೆ. ಚಿಕ್ಕಣ್ಣ ಕಪ್ಪು ಬಣ್ಣದ ಪ್ಯಾಂಟ್, ಬಿಳಿ ಶರ್ಟ್ ಹಾಗೂ ನೀಲಿ ಬ್ಲೇಜರ್ ಧರಿಸಿದ್ದರೆ, ಪಾವನಾ ಗೌಡ ನೀಲಿ ಬಣ್ಣದ ಮಿಂಚುವ ಲೆಹೆಂಗಾದಲ್ಲಿ ಗಮನ ಸೆಳೆದಿದ್ದಾರೆ. ಇಬ್ಬರೂ ಕೈಹಿಡಿದು ನಿಂತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಆಗಸ್ಟ್ 30ರಂದು ಧಾರಾ ಮುಹೂರ್ತದೊಂದಿಗೆ ಚಿಕ್ಕಣ್ಣ-ಪಾವನಾ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮದುವೆ ಸಂಭ್ರಮದ ಭಾಗವಾಗಿ ಈಗಾಗಲೇ ಮೆಹಂದಿ ಹಾಗೂ ಅರಿಶಿಣ ಶಾಸ್ತ್ರಗಳು ನೆರವೇರಿವೆ. ಕುಟುಂಬಸ್ಥರು, ಬಂಧು-ಮಿತ್ರರು ಹಾಗೂ ಆಪ್ತರ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮಗಳಲ್ಲಿ ಚಿಕ್ಕಣ್ಣ ಮತ್ತು ಪಾವನಾ ಗೌಡ ಸಂಭ್ರಮದಿಂದ ಪಾಲ್ಗೊಂಡಿದ್ದರು. ಶನಿವಾರ ನಡೆಯುತ್ತಿರುವ ಆರತಕ್ಷತೆಗೆ ಸ್ಯಾಂಡಲ್‌ವುಡ್‌ನ ಹಲವು ಗಣ್ಯರು, ಚಿತ್ರರಂಗದ ಸ್ನೇಹಿತರು ಹಾಗೂ ಗಣ್ಯ ಅತಿಥಿಗಳು ಆಗಮಿಸಿದ್ದಾರೆ.















