ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಪಿಂಕ್ ಬಣ್ಣದ ವಿದ್ಯುದ್ದೀಪಗಳಿಂದ ಕಂಗೊಳಿಸಿದ ದಕ್ಷಿಣ ಕನ್ನಡ ಡಿಸಿ ಕಚೇರಿ!



(ನ್ಯೂಸ್‌ ಕಡಬ) newskadaba.com,  ಆ.31: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆ ಜಾರಿಗೆ ಬಂದು ಮೂರು ವರ್ಷ ಪೂರೈಸಿದ (ಆಗಸ್ಟ್ 30) ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡಕ್ಕೆ ಭಾನುವಾರ ರಾತ್ರಿ ವಿಶೇಷ ವಿದ್ಯುದ್ದೀಪಾಲಂಕಾರ ಮಾಡಲಾಗಿತ್ತು.ಮಹಿಳೆಯರ ಸ್ವಾವಲಂಬನೆ ಹಾಗೂ ಹೆಮ್ಮೆಯ ಸಂಕೇತವಾಗಿ ಇಡೀ ಜಿಲ್ಲಾಧಿಕಾರಿ ಕಚೇರಿ ಕಟ್ಟಡವನ್ನು ಗುಲಾಬಿ ಬಣ್ಣದ ಬೆಳಕಿನಿಂದ ಸಿಂಗರಿಸಲಾಗಿತ್ತು.







ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ ₹2,000 ನೀಡುವ ಈ ಯೋಜನೆಯಡಿ ಇದುವರೆಗೆ ಒಟ್ಟು 1.20 ಕೋಟಿ ಫಲಾನುಭವಿಗಳ ಖಾತೆಗೆ ₹76,500 ಕೋಟಿಗೂ ಅಧಿಕ ಹಣ ಜಮೆ ಮಾಡಲಾಗಿದೆ.ಈ ವಿಶೇಷ ವಿದ್ಯುದ್ದೀಪಾಲಂಕಾರ ವ್ಯವಸ್ಥೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿತ್ತು.






error: Content is protected !!
Scroll to Top